ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರವಾಸೋದ್ಯಮ ಹಾಗೂ ವಿದ್ಯಾಭ್ಯಾಸದ ದೃಷ್ಟಿಯಿಂದ ಉತ್ತರ ಕರ್ನಾಟಕದ ಬಹುತೇಕ ಮಂದಿ ಕರಾವಳಿ ಕಡೆ ಬರುತ್ತಿದ್ದಾರೆ. ಪ್ರವಾಸೋದ್ಯಮಕ್ಕೆ ಅಡ್ಡಿಯಾಗಿರುವ ಸಿಆರ್‌ಝೆಡ್ ಕ್ಲಿಯರ್ ಮಾಡಲು ನಮ್ಮ ಸರಕಾರ ತೀರ್ಮಾನ ಕೈಗೊಳ್ಳಲಿದೆ.
ಹೊರ ರಾಜ್ಯ, ಹೊಸ ದೇಶಗಳಲ್ಲೂ ಉದ್ಯಮ ಸ್ಥಾಪಿಸಿರುವ ಕರಾವಳಿ ಭಾಗದ ಉದ್ಯಮಿಗಳು ತವರಿನತ್ತ ಮುಖ ಮಾಡುತ್ತಿದ್ದು, ಅವರಿಗೆ ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತಗಳ ಸಹಯೋಗದಲ್ಲಿ ನಡೆದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವೆ, ಮುಂದಿನ ದಿನಗಳಲ್ಲಿ ಕರಾವಳಿ ಜಿಲ್ಲೆಗಳು ಇಡೀ ವಿಶ್ವದಲ್ಲೇ ಗಮನ ಸೆಳೆಯಲಿವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರಾವಳಿ ಅಭಿವೃದ್ಧಿಗೆ ಪಣತೊಟ್ಟಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅಧಿಕಾರಿ ವರ್ಗದವರಿಗೆ ಅಭಿನಂದನೆ ಹೇಳಲು ಬಯಸುವೆ. ಮುಂದೆ ಇತಿಹಾಸ ಸೃಷ್ಟಿಸಲು ಇದು ಉತ್ತಮ ವೇದಿಕೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಪ್ರವಾಸೋದ್ಯಮ ಹಾಗೂ ವಿದ್ಯಾಭ್ಯಾಸದ ದೃಷ್ಟಿಯಿಂದ ಉತ್ತರ ಕರ್ನಾಟಕದ ಬಹುತೇಕ ಮಂದಿ ಕರಾವಳಿ ಕಡೆ ಬರುತ್ತಿದ್ದಾರೆ. ಪ್ರವಾಸೋದ್ಯಮಕ್ಕೆ ಅಡ್ಡಿಯಾಗಿರುವ ಸಿಆರ್‌ಝೆಡ್ ಕ್ಲಿಯರ್ ಮಾಡಲು ನಮ್ಮ ಸರಕಾರ ತೀರ್ಮಾನ ಕೈಗೊಳ್ಳಲಿದೆ. ಈ ಮೂರು ಜಿಲ್ಲೆಗಳನ್ನು ಬೆಳೆಸೋಣ, ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚು ಆರ್ಥಿಕ ಶಕ್ತಿ ಸಿಗುವಂತೆ ಮಾಡೋಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆನೀಡಿದರು.
ಈ ವೇಳೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ. ಪಾಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.