10 ವರ್ಷಗಳಲ್ಲಿ 100 ವಿಮಾನ ನಿಲ್ದಾಣ ನಿರ್ಮಾಣ
ದೇಶದ ವಾಯುಯಾನ ಕ್ಷೇತ್ರವನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಮುಂದಿನ 10 ವರ್ಷಗಳಲ್ಲಿ ₹30 ಸಾವಿರ ಕೋಟಿ ವೆಚ್ಚದಲ್ಲಿ 100 ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.
ದೇಶದ ವಾಯುಯಾನ ಕ್ಷೇತ್ರವನ್ನು ಮತ್ತಷ್ಟು ವಿಸ್ತರಿಸುವ ಉದೇಶದಿಂದ ಮುಂದಿನ 10 ವರ್ಷಗಳಲ್ಲಿ 100 ಹೂಸ ವಿಮಾನ ವಿಲ್ದಾಣಗಳನ್ನು ನಿರ್ಮಿಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ಸುಮಾರು 30.000 ಕೋಟಿರೂ ಹೂಡಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ವಿಮಾನ , ಪ್ರಯಾಣಿಕರ ಸಂಖ್ಯೆ ಮತ್ತು ವಾಯುಯಾನ ಕ್ಷೇತ್ರದ ವಿಸ್ತರಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ. ಪ್ರಸ್ತುತ ದೇಶದಲ್ಲಿ ಸುಮಾರು166 ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿವೆ. ಮುಂದಿನ 10 ವರ್ಷಗಳಲ್ಲಿ 100 ಹೊಸ ವಿಮಾನ ನಿಲ್ದಾಣಗಳು ನಿರ್ಮಾಣವಾದರೆ ಒಟ್ಟು ಸಂಖ್ಯೆ ಸುಮಾರು 266 ಕ್ಕೆ ಏರಿಕೆಯಾಗಲಿದೆ.
ಹೊಸ ವಿಮಾನ ನಿಲ್ದಾಣಗಳ ನಿರ್ಮಾಣದ ಜತೆಗೆ 200 ಕ್ಕೊ ಹೆಚ್ಚು ಹೆಲಿಪ್ಯಾಡ್ ಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಸರಕಾರದ ಮುಂದಿದೆ . ಇದರ ಮೂಲಕ ದೂರದ ಹಾಗೂ ಸಂಪರ್ಕ ವ್ಯವಸ್ಥೆ ಕಡಿಮೆ ಇರುವ ಪ್ರದೇಶಗಳಿಗೂ ವೇಗದ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಿದೆ. ವಿಮಾನ ನಿಲ್ದಾಣಗಳ ಸಂಖ್ಯೆ ಹೆಚ್ಚಿದಂತೆ ದೇಶದ ಪ್ರವಾಸೋದ್ಯಮ, ವ್ಯಾಪಾರ , ಕೈಗಾರಿಕೆ, ಮತ್ತು ಉದ್ಯೋಗಾವಕಾಶಗಳಿಗೆ ಹೆಚ್ಚಿನ ಉತ್ತೇಜನ ದೊರೆಯುವ ಸಾಧ್ಯತೆಯಿದೆ.
ಪ್ರವಾಸಿಗರು ಪ್ರಮುಖ ಪ್ರವಾಸಿ ತಾಣಗಳಿಗೆ ಸುಲಭವಾಗಿ ತಲುಪಲು ಹೊಸ ವಿಮಾನ ಸಂಪರ್ಕಗಳು ಸಹಕಾರಿಯಾಗಲಿದೆ. ಪ್ರದೇಶಿಕ ವಿಮಾನ ಸಂಪರ್ಕವನ್ನು ಬಲಪಡಿಸುವ ಉಡಾನ್ ಯೋಜನೆಯ ಮೂಲಕವೂ ಸಣ್ಣ ನಗರಗಳು ಮತ್ತು ಪಟ್ಟಣಗಳಿಗೆ ವಿಮಾನ ಸೇವೆ ವಿಸ್ತರಿಸಲಾಗುತ್ತಿದೆ. ಹೊಸ ವಿಮಾನ ನಿಲ್ದಾಣಗಳ ನಿರ್ಮಾಣದಿಂದ ದೇಶದ ವಾಯು ಸಂಪರ್ಕ ಜಾಲ ಮತ್ತಷ್ಟು ಬೆಳವಣಿಗೆಯಾಗಲಿದೆ. ಮುಂದಿನ ದಿನಗಳಲ್ಲಿ ಸಾಮಾನ್ಯ ಜನರಿಗೂ ವಿಮಾನ ಪ್ರಯಾಣ ಇನ್ನಷ್ಟು ಸುಲಭವಾಗಿ ಲಭ್ಯವಾಗುವ ನಿರೀಕ್ಷೆಯಿದೆ.