Wednesday, July 8, 2026
Wednesday, July 8, 2026

ಅಮರನಾಥ ಯಾತ್ರೆಯನ್ನು ಆಧ್ಯಾತ್ಮಿಕ ಪ್ರವಾಸೋದ್ಯಮದ ಮಾದರಿಯನ್ನಾಗಿ ರೂಪಿಸೋಣ

ಅಮರನಾಥ ಯಾತ್ರೆ ಭಾರತದ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಈ ವರ್ಷದ ಯಾತ್ರೆಯನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಗಳು ಮತ್ತು ಸಂಬಂಧಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಮರನಾಥ ಯಾತ್ರೆಯನ್ನು ದೇಶದ ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಮಾದರಿಯನ್ನಾಗಿ ರೂಪಿಸುವಂತೆ ಕರೆ ನೀಡಿದ್ದಾರೆ.

ಅಮರನಾಥ ಯಾತ್ರೆ ಭಾರತದ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಈ ವರ್ಷದ ಯಾತ್ರೆಯನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಗಳು ಮತ್ತು ಸಂಬಂಧಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.

Untitled design (40)

ಅಮರನಾಥ ಯಾತ್ರೆಯು ಕೇವಲ ಧಾರ್ಮಿಕ ಆಚರಣೆಯಲ್ಲ, ಅದು ದೇಶದ ಆಧ್ಯಾತ್ಮಿಕ ಪ್ರವಾಸೋದ್ಯಮದ ಬೆಳವಣಿಗೆಗೆ ದಾರಿದೀಪವಾಗುವ ಸಾಮರ್ಥ್ಯ ಹೊಂದಿದೆ. ಯಾತ್ರೆಯ ನಿರ್ವಹಣೆ, ಭದ್ರತೆ, ಮೂಲಸೌಕರ್ಯ, ಸ್ವಚ್ಛತೆ ಹಾಗೂ ಯಾತ್ರಿಕರಿಗೆ ನೀಡುವ ಸೇವೆಗಳಲ್ಲಿ ಉನ್ನತ ಗುಣಮಟ್ಟವನ್ನು ಕಾಯ್ದುಕೊಂಡರೆ, ಇದೇ ಮಾದರಿಯನ್ನು ದೇಶದ ಇತರ ಪ್ರಮುಖ ತೀರ್ಥಕ್ಷೇತ್ರಗಳಲ್ಲಿಯೂ ಅನುಸರಿಸಬಹುದು ಎಂದಿದ್ದಾರೆ.

ಯಾತ್ರಿಕರಿಗೆ ಸುರಕ್ಷಿತ ಹಾಗೂ ಸುಗಮ ಅನುಭವ ಒದಗಿಸುವುದು ಆಡಳಿತದ ಪ್ರಮುಖ ಆದ್ಯತೆಯಾಗಿದ್ದು, ಸರಕಾರ, ಭದ್ರತಾ ಪಡೆಗಳು, ಸ್ವಯಂಸೇವಕರು ಹಾಗೂ ಸ್ಥಳೀಯ ಸಮುದಾಯದ ಸಹಕಾರದಿಂದ ಅಮರನಾಥ ಯಾತ್ರೆಯನ್ನು ವಿಶ್ವಮಟ್ಟದ ಆಧ್ಯಾತ್ಮಿಕ ಪ್ರವಾಸೋದ್ಯಮದ ಮಾದರಿಯನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!