Tuesday, April 28, 2026
Tuesday, April 28, 2026

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ' ಶಿಲ್ಪ ಅನಾವರಣ

ಸ್ಪೇನ್‍ನ ಖ್ಯಾತ ಕಲಾಕಾರ ಜೌಮೆ ಪ್ಲೆನ್ಸಾ ಅವರ ಕಲ್ಪನೆಯಲ್ಲಿ ಮೂಡಿಬಂದಿರುವ ಬೆಂಗಳೂರಿನ ಆತ್ಮ ಶಿಲ್ಪವನ್ನು ಟರ್ಮಿನಲ್-2ರ ಮುಂಭಾಗದಲ್ಲಿ ಲೋಕಾರ್ಪಣೆಗೊಳಿಸಲಾಗಿದೆ. ಬಯೊಕಾನ್ ಫೌಂಡೇಷನ್ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್)ಸಹಯೋಗದಲ್ಲಿ ಈ ಕಲಾಕೃತಿಯನ್ನು ಸ್ಥಾಪಿಸಲಾಗಿದೆ.

ಬೆಂಗಳೂರಿನ ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ಜಗತ್ತಿಗೆ ಸಾರುವ ಉದ್ದೇಶದಿಂದ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ' ಹೆಸರಿನ ಸುಂದರ ಹಾಗೂ ಬೃಹತ್ ಕಲಾತ್ಮಕ ಶಿಲ್ಪವನ್ನು ಲೋಕಾರ್ಪಣೆ ಮಾಡಲಾಗಿದೆ. ಸ್ಪೇನ್‍ನ ಖ್ಯಾತ ಕಲಾಕಾರ ಜೌಮೆ ಪ್ಲೆನ್ಸಾ ಅವರ ಕಲ್ಪನೆಯಲ್ಲಿ ಮೂಡಿಬಂದಿರುವ ಈ ಶಿಲ್ಪವನ್ನು ಟರ್ಮಿನಲ್-2ರ ಮುಂಭಾಗದಲ್ಲಿ ಲೋಕಾರ್ಪಣೆಗೊಳಿಸಲಾಗಿದೆ. ಬಯೊಕಾನ್ ಫೌಂಡೇಷನ್ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್)ಸಹಯೋಗದಲ್ಲಿ ಈ ಕಲಾಕೃತಿಯನ್ನು ಸ್ಥಾಪಿಸಲಾಗಿದೆ. ಭಾರತದಲ್ಲಿನ ಸ್ಪೇನ್ ರಾಯಭಾರಿ ಜುವಾನ್ ಆಂಟೋನಿಯೊ ಮಾರ್ಚ್ ಪೂಜೋಲ್ ಅವರು ಈ ಕಲಾಕೃತಿಯನ್ನು ಅಧಿಕೃತವಾಗಿ ಅನಾವರಣಗೊಳಿಸಿದರು. ಸಮಾರಂಭದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಬಯೊಕಾನ್ ಗ್ರೂಪ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ, ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹರಿ ಮರಾರ್ ಮತ್ತು ಕಲಾಕೃತಿಯ ರೂವಾರಿ ಜೌಮೆ ಪ್ಲೆನ್ಸಾ ಉಪಸ್ಥಿತರಿದ್ದರು.

ಇದನ್ನೂ ಓದಿ: ನೀಲಕುರಂಜಿ ಹೂವುಗಳಿಗೆ ಅಪಾಯ

Untitled design - 2026-04-28T182016.532

ಕಲಾಕೃತಿಯ ವಿಶೇಷತೆಗಳೇನು?

ಬಣ್ಣ ಬಳಿದಿರುವ ಸ್ಟೇನ್‍ಲೆಸ್ ಸ್ಟೀಲ್ ಲೋಹದಿಂದ ಈ ಕಲಾಕೃತಿಯನ್ನು ನಿರ್ಮಿಸಲಾಗಿದ್ದು, ಇದು 500 x 319 x 375 ಸೆಂ.ಮೀ ಗಾತ್ರ ಹೊಂದಿದೆ. ಬೆಂಗಳೂರು ನಗರವು ಹೇಗೆ ಭಿನ್ನ-ವಿಭಿನ್ನ ಸಂಸ್ಕೃತಿಗಳು, ನಾವೀನ್ಯತೆ ಹಾಗೂ ಸೃಜನಶೀಲತೆಯ ಸಂಗಮವಾಗಿದೆ ಎಂಬುದನ್ನು ಈ ಕಲಾಕೃತಿ ಪ್ರತಿನಿಧಿಸುತ್ತದೆ. ಇದರ ಕಲಾವಿದ ಜೌಮೆ ಪ್ಲೆನ್ಸಾ ಅವರು ಶಿಕಾಗೊ, ನ್ಯೂಯಾರ್ಕ್, ಲಂಡನ್, ಟೋಕಿಯೊ, ಬಾರ್ಸಿಲೋನಾ,ಮ್ಯಾಡ್ರಿಡ್ ಸೇರಿದಂತೆ ಜಗತ್ತಿನ ಬಹುದೊಡ್ಡ ಮಹಾನಗರಗಳಲ್ಲಿ ತಮ್ಮ ಸಾರ್ವಜನಿಕ ಕಲಾಕೃತಿಗಳ ಮೂಲಕ ಅಂತಾರಾಷ್ಟ್ರೀಯ ಮನ್ನಣೆ ಗಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಬಯೊಕಾನ್ ಗ್ರೂಪ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ, ‘ನಗರವೊಂದರ ಅಭಿವೃದ್ಧಿ ಎಂದರೆ ಕೇವಲ ಮೂಲ ಸೌಕರ್ಯಗಳಲ್ಲಿ ಹೂಡಿಕೆ ಮಾಡುವುದಲ್ಲ.ಕಲೆ ಮತ್ತು ಸಂಸ್ಕೃತಿಯಲ್ಲೂ ಹೂಡಿಕೆ ಮಾಡುವುದು ಅತ್ಯಗತ್ಯ ಎಂಬುದು ಬಯೊಕಾನ್ ಫೌಂಡೇಷನ್‍ನ ನಂಬಿಕೆಯಾಗಿದೆ. ಜೌಮೆ ಪ್ಲೆನ್ಸಾ ಅವರ ಈ ಕಲಾಕೃತಿಯು, ಜಾಗತಿಕವಾಗಿ ಸಂಪರ್ಕ ಹೊಂದಿರುವ ಜತೆಗೆ ನಮ್ಮ ಮೂಲ ವೈವಿಧ್ಯತೆಯನ್ನು ಎತ್ತಿಹಿಡಿಯುತ್ತದೆ. ದಿನನಿತ್ಯ ವಿಮಾನ ನಿಲ್ದಾಣದ ಮೂಲಕ ಹಾದುಹೋಗುವ ಲಕ್ಷಾಂತರ ದೇಶ-ವಿದೇಶಿ ಪ್ರಯಾಣಿಕರಿಗೆ ಈ 'ಬೆಂಗಳೂರಿನ ಆತ್ಮ' ಶಿಲ್ಪವು ಉದ್ಯಾನ ನಗರಿಯ ಮರೆಯಲಾಗದ ನೆನಪನ್ನು ಕಟ್ಟಿಕೊಡಲಿದೆ ಎಂದು ಹೇಳಿದರು.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..