ಬೇಪೋರ್ ಇನ್ನು ಅಂತಾರಾಷ್ಟ್ರೀಯ ಪ್ರವಾಸೋದ್ಯಮ ತಾಣ
ಫೆಬ್ರವರಿ 7 ಮತ್ತು 8ರಂದು ಕೋಜಿಕೋಡಿನಲ್ಲಿ ನಡೆಯಲಿರುವ ಗ್ಲೋಬಲ್ ರೆಸ್ಪಾನ್ಸಿಬಲ್ ಟೂರಿಸಂ ಮೀಟ್‌ನಲ್ಲಿ ಈ ಕುರಿತು ಅಧಿಕೃತ ಘೋಷಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಬೇಪೋರ್ ಪ್ರದೇಶದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಜಾರಿಗೆ ತರಲಾದ ವಿವಿಧ ಅಭಿವೃದ್ಧಿ ಯೋಜನೆಗಳು ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕಾರಿಯಾಗಿವೆ.
ಐತಿಹಾಸಿಕ ಮಹತ್ವ ಹೊಂದಿರುವ ಬೇಪೋರ್ ಬಂದರು ಪ್ರದೇಶವನ್ನು ಅಂತಾರಾಷ್ಟ್ರೀಯ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸುವ ನಿರ್ಧಾರವನ್ನು ಕೇರಳ ಸರಕಾರ ಕೈಗೊಂಡಿದೆ. ಉತ್ತರ ಕೇರಳದ ಪ್ರವಾಸೋದ್ಯಮಕ್ಕೆ ಇದು ಮಹತ್ವದ ಮೈಲಿಗಲ್ಲಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫೆಬ್ರವರಿ 7 ಮತ್ತು 8ರಂದು ಕೋಜಿಕೋಡಿನಲ್ಲಿ ನಡೆಯಲಿರುವ ಗ್ಲೋಬಲ್ ರೆಸ್ಪಾನ್ಸಿಬಲ್ ಟೂರಿಸಂ ಮೀಟ್‌ನಲ್ಲಿ ಈ ಕುರಿತು ಅಧಿಕೃತ ಘೋಷಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಬೇಪೋರ್ ಪ್ರದೇಶದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಜಾರಿಗೆ ತರಲಾದ ವಿವಿಧ ಅಭಿವೃದ್ಧಿ ಯೋಜನೆಗಳು ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕಾರಿಯಾಗಿವೆ.

ಅರೇಬಿಯನ್ ಸಾಗರ ಮತ್ತು ಚಾಲಿಯಾರ್ ನದಿಯ ನಡುವೆ ಇರುವ ಬೇಪೋರ್ ತನ್ನ ಸಮುದ್ರ ಸಂಪ್ರದಾಯ, ಐತಿಹಾಸಿಕ ಹಿನ್ನಲೆ ಹಾಗೂ ನೈಸರ್ಗಿಕ ಸೌಂದರ್ಯಕ್ಕಾಗಿ ಪ್ರಸಿದ್ಧವಾಗಿದೆ. ಹಳೆಯ ಕಾಲದಲ್ಲಿ ಪಶ್ಚಿಮ ಏಷ್ಯಾ ಮತ್ತು ಯೂರೋಪ್ ನಡುವಿನ ವ್ಯಾಪಾರ ಸಂಪರ್ಕದಲ್ಲಿ ಪ್ರಮುಖ ಪಾತ್ರವಹಿಸಿದ್ದ ಈ ಬಂದರು ಪ್ರದೇಶ ಇದೀಗ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿ ಬೆಳೆಯುತ್ತಿದೆ.
2024–25ನೇ ಸಾಲಿನಲ್ಲಿ ಬೇಪೋರ್ ಪ್ರವಾಸೋದ್ಯಮ ಅಭಿವೃದ್ಧಿಯ ಮೊದಲ ಹಂತಕ್ಕೆ 50 ಲಕ್ಷ ರು. ಅನುದಾನ ನೀಡಲಾಗಿದ್ದು, ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಂಡಿದೆ. ಮುಂದಿನ 2025–26ನೇ ಸಾಲಿನಲ್ಲಿ ಹೆಚ್ಚುವರಿ ಅಭಿವೃದ್ಧಿ ಕಾರ್ಯಗಳಿಗೆ 1ಕೋಟಿ ರು. ಅನುದಾನ ಮಂಜೂರಾಗಿದೆ.
ಸ್ಥಳೀಯ ಸಮುದಾಯದ ಭಾಗವಹಿಸುವಿಕೆಯಿಂದ ಜಾರಿಗೊಂಡಿರುವ ಜವಾಬ್ದಾರಿಯುತ ಪ್ರವಾಸೋದ್ಯಮ ಯೋಜನೆಗಳು ಉದ್ಯೋಗಾವಕಾಶ ಸೃಷ್ಟಿ, ಮಹಿಳಾ ಸಬಲೀಕರಣ ಮತ್ತು ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆಯ ಮೂಲಕ ಬೇಪೋರ್ ಅನ್ನು ಜಾಗತಿಕ ಪ್ರವಾಸಿ ನಕ್ಷೆಯಲ್ಲಿ ಪ್ರಮುಖ ಸ್ಥಾನಕ್ಕೆ ತರುವ ಗುರಿಯನ್ನು ಸರಕಾರ ಹೊಂದಿದೆ.