ಬಿಎಂಟಿಸಿಯ ದೂರದ ಮಾರ್ಗಗಳ ಪ್ರಯಾಣಿಕರ ಅನುಕೂಲಕ್ಕಾಗಿ ಸಾಮಾನ್ಯ ‘ವಿಸ್ತಾರ ಪಾಸ್’ಗಳನ್ನು ಪರಿಚಯಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ. ಬಿಎಂಟಿಸಿ ಸಂಸ್ಥೆಯ ಕಾರ್ಯಾಚರಣೆ ವ್ಯಾಪ್ತಿಯನ್ನು 65 ರಿಂದ 70 ಕಿಮೀ. ವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ, ಚಿಕ್ಕಬಳ್ಳಾಪುರ, ಮಾಲೂರು ಸೇರಿದಂತೆ ಬೆಂಗಳೂರು ನಗರ ಸುತ್ತಮುತ್ತಲಿನ ಪ್ರಮುಖ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿಗೆ ಬಿಎಂಟಿಸಿ ಬಸ್‌ ಸೇವೆ ನೀಡುತ್ತಿದೆ.

ಇದನ್ನೂ ಓದಿ: ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಶಸ್ತಿಯ ಗರಿ

ಹೊಸ ಕಾರ್ಯಾಚರಣೆ ವ್ಯಾಪ್ತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ನಗರದ ಕೇಂದ್ರಭಾಗದಿಂದ 40 ಕಿಮೀ ವರೆಗಿನ ಪ್ರದೇಶವನ್ನು ಸೀಮಿತ ವ್ಯಾಪ್ತಿಯಲ್ಲಿ ಅದರಾಚೆಗಿನ ಪ್ರದೇಶವನ್ನು ‘ವಿಸ್ತಾರ ವ್ಯಾಪ್ತಿ’ ಎಂದು ವರ್ಗೀಕರಿಸಲಾಗಿದೆ. ವಿಸ್ತಾರ ವ್ಯಾಪ್ತಿಯ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಜೂ. 2ರಿಂದ ಸಾಮಾನ್ಯ ವಿಸ್ತಾರ ದೈನಿಕ, ಸಾಪ್ತಾಹಿಕ ಮತ್ತು ಮಾಸಿಕ ಪಾಸ್‌ಗಳನ್ನು ಪರಿಚಯಿಸಲಾಗಿದೆ. ಈ ಸಾಮಾನ್ಯ ವಿಸ್ತಾರ ದೈನಿಕ ಪಾಸುಗಳ ಬೆಲೆ 120 ರು., ಸಾಮಾನ್ಯ ವಿಸ್ತಾರ ಮಾಸಿಕ ಪಾಸು ದರ 550 ರು., ಸಾಮಾನ್ಯ ಮಾಸಿಕ ಪಾಸು 1200 ಹಾಗೂ ಸಾಮಾನ್ಯ ವಿಸ್ತಾರ ಮಾಸಿಕ ಪಾಸು 1500 ರು. ನಿಗದಿ ಮಾಡಲಾಗಿದೆ.