Sunday, December 28, 2025
Sunday, December 28, 2025

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ

ಪ್ರಾಥಮಿಕ ಶೋಧದ ನಂತರ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ವರದಿ ಮಾಡಿದ್ದಾರೆ. ಈ ಹಿಂದೆ ಕೆಲವು ನಿರ್ದಿಷ್ಟ ವಿಮಾನಗಳಿಗೂ ಬಾಂಬ್ ಬೆದರಿಕೆ ಇಮೇಲ್‌ ಬಂದಿದ್ದವು. ವಿಮಾನ ನಿಲ್ದಾಣದ ಅಧಿಕಾರಿಗಳು ಭದ್ರತಾ ತಪಾಸಣೆ ಮಾಡಿದ್ದರು.

ಬೆಂಗಳೂರು : ಬೆಂಗಳೂರಿನ (Bengaluru) ದೇವನಹಳ್ಳಿಯ (Devanahalli) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಮತ್ತೆ ಹುಸಿಬಾಂಬ್ ಬೆದರಿಕೆ (Bomb threat) ಇ-ಮೇಲ್ ಬಂದಿದೆ. ವಾರದಲ್ಲಿ ಎರಡನೇ ಬಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್ ಬಂದಿದೆ. ದೇವನಹಳ್ಳಿ ಸಮೀಪದಲ್ಲಿರುವ ಏರ್‌ಪೋರ್ಟ್‌ಗೆ ಬೆದರಿಕೆ ಕರೆ ಬಂದಿದೆ. ವಿಮಾನ ನಿಲ್ದಾಣದ ಭದ್ರತಾ ಪಡೆ ಇ-ಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

airport bng

ಪ್ರಾಥಮಿಕ ಶೋಧದ ನಂತರ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ವರದಿ ಮಾಡಿದ್ದಾರೆ. ಈ ಹಿಂದೆ ಕೆಲವು ನಿರ್ದಿಷ್ಟ ವಿಮಾನಗಳಿಗೂ ಬಾಂಬ್ ಬೆದರಿಕೆ ಇಮೇಲ್‌ ಬಂದಿದ್ದವು. ವಿಮಾನ ನಿಲ್ದಾಣದ ಅಧಿಕಾರಿಗಳು ಭದ್ರತಾ ತಪಾಸಣೆ ಮಾಡಿದ್ದರು. ಇದುವರೆಗಿನ ಎಲ್ಲ ಬಾಂಬ್ ಬೆದರಿಕೆಗಳೂ ಹುಸಿಯಾಗಿವೆ. ಆದರೆ ಯಾವುದೇ ಬೆದರಿಕೆ ಕರೆಯನ್ನು ಸುಮ್ಮನೆ ಬಿಡಲು ಸಾಧ್ಯವಾಗುತ್ತಿಲ್ಲ.

ಕಳೆದ ವರ್ಷ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಹಲವಾರು ಬಾಂಬ್ ಬೆದರಿಕೆಗಳು ಬಂದಿವೆ. ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿ 240 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಘಟನೆಯ ನಂತರ ಬಾಂಬ್‌ ಬೆದರಿಕೆಗಳನ್ನು ಇನ್ನಷ್ಟು ಗಂಭೀರವಾಗಿ ಪರಿಗಣಿಸಲಾಗುತ್ತಿದೆ.

Bhagya Divana

Bhagya Divana

Bhagya Divana is a Professional Journalist. Working in Pravasi Prapancha.

ಕಲ್ಲಿನಲ್ಲಿ ಅರಳಿದ ಕಲಾಕುಸುಮ - ಪುಷ್ಕರಣಿ

Read Previous

ಕಲ್ಲಿನಲ್ಲಿ ಅರಳಿದ ಕಲಾಕುಸುಮ - ಪುಷ್ಕರಣಿ

ಮಕ್ಕಳ ಜೊತೆ ಬೆಂಗಳೂರಿನ ಈ ಸ್ಥಳಗಳಿಗೊಮ್ಮೆ ಭೇಟಿ ಕೊಟ್ಟು ನೋಡಿ, ನೀವೂ ಮಕ್ಕಳೇ ಆಗಿಬಿಡುತ್ತೀರಿ..

Read Next

ಮಕ್ಕಳ ಜೊತೆ ಬೆಂಗಳೂರಿನ ಈ ಸ್ಥಳಗಳಿಗೊಮ್ಮೆ ಭೇಟಿ ಕೊಟ್ಟು ನೋಡಿ, ನೀವೂ ಮಕ್ಕಳೇ ಆಗಿಬಿಡುತ್ತೀರಿ..