Tuesday, July 21, 2026
Tuesday, July 21, 2026

ಇರಾನ್‌ಗೆ ಪ್ರಯಾಣ ಮುಂದೂಡುವಂತೆ ಭಾರತೀಯರಿಗೆ ಕೇಂದ್ರದ ಸಲಹೆ

ಇರಾನ್‌ನಲ್ಲಿ ದಿನದಿಂದ ದಿನಕ್ಕೆ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರಕಾರವು ತನ್ನ ನಾಗರಿಕರಿಗೆ ಹೊಸ ಪ್ರಯಾಣ ಸಲಹೆ (Travel Advisory) ಹೊರಡಿಸಿದೆ.

ಇರಾನ್‌ನಲ್ಲಿ ದಿನದಿಂದ ದಿನಕ್ಕೆ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರಕಾರವು ತನ್ನ ನಾಗರಿಕರಿಗೆ ಹೊಸ ಪ್ರಯಾಣ ಸಲಹೆ (Travel Advisory) ಹೊರಡಿಸಿದೆ. ಯಾವುದೇ ಉದ್ದೇಶಕ್ಕಾಗಿ ಇರಾನ್‌ಗೆ ತೆರಳಲು ಯೋಜಿಸಿರುವ ಭಾರತೀಯರು ಸದ್ಯಕ್ಕೆ ತಮ್ಮ ಪ್ರಯಾಣವನ್ನು ಮುಂದೂಡಬೇಕು ಎಂದು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.

Untitled design - 2026-07-20T171504.985

ಈಗಾಗಲೇ ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ನಾಗರಿಕರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ, ಸಾಧ್ಯವಾದರೆ ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ತಾತ್ಕಾಲಿಕವಾಗಿ ದೇಶವನ್ನು ತೊರೆಯುವಂತೆ ಸಲಹೆ ನೀಡಲಾಗಿದೆ. ಅಲ್ಲಿಯೇ ಉಳಿಯಬೇಕಾದ ಅನಿವಾರ್ಯತೆ ಇದ್ದರೆ ಅತ್ಯುನ್ನತ ಮಟ್ಟದ ಎಚ್ಚರಿಕೆ ವಹಿಸಬೇಕು, ಸ್ಥಳೀಯ ಆಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಇರಾನ್‌ನಲ್ಲಿ ಅಸ್ಥಿರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಭಾರತೀಯ ರಾಯಭಾರ ಕಚೇರಿ ತನ್ನ ಅಧಿಕೃತ ವೆಬ್‌ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಕಟಿಸುವ ನವೀಕರಣಗಳನ್ನು ನಿರಂತರವಾಗಿ ಪರಿಶೀಲಿಸುವಂತೆ ಭಾರತೀಯರಿಗೆ ಸೂಚಿಸಲಾಗಿದೆ. ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣವೇ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ನೆರವು ಪಡೆಯುವಂತೆ ಮನವಿ ಮಾಡಲಾಗಿದೆ. ಪರಿಸ್ಥಿತಿ ಸುಧಾರಿಸುವವರೆಗೆ ಇರಾನ್‌ಗೆ ಅನಗತ್ಯ ಪ್ರಯಾಣವನ್ನು ಸಂಪೂರ್ಣವಾಗಿ ತಪ್ಪಿಸುವುದೇ ಸುರಕ್ಷಿತ ಎಂದು ಭಾರತ ಸರಕಾರ ಮತ್ತೊಮ್ಮೆ ಒತ್ತಿಹೇಳಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಇದು 1753ರ ಮನೆ, ಗೊತ್ತಿರಲಿ!

Read Previous

ಇದು 1753ರ ಮನೆ, ಗೊತ್ತಿರಲಿ!

ಅಚ್ಚರಿ ಮೂಡಿಸುವ ʻಬ್ಲೂ ಡ್ರ್ಯಾಗನ್‌ ನದಿʼ...

Read Next

ಅಚ್ಚರಿ ಮೂಡಿಸುವ ʻಬ್ಲೂ ಡ್ರ್ಯಾಗನ್‌ ನದಿʼ...