ಇರಾನ್ ಮತ್ತು ಇಸ್ರೇಲ್ ನಡುವೆ ಘರ್ಷಣೆ ಪ್ರಾರಂಭ
ಭಾರತೀಯ ರಾಯಭಾರ ಕಚೇರಿ ಮತ್ತು ಕಾನ್ಸುಲೇಟ್ ಜನರಲ್ ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ, ರಾಯಭಾರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಿಸಲಾಗಿದೆ. ಸೌದಿ ಅರೇಬಿಯಾ ಸರಕಾರ ಮತ್ತು ಏರ್ ಇಂಡಿಯಾ ವಿಮಾನ ಸಂಸ್ಥೆಯಿಂದಲೂ ಪ್ರಕಟಣೆಗಳು ಹೊರಬಂದಿದ್ದು, ನಾಗರಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಇರಾನ್ ಮತ್ತು ಇಸ್ರೇಲ್ ನಡುವೆ ಘರ್ಷಣೆ ಪ್ರಾರಂಭವಾಗಿದೆ. ಹೀಗಾಗಿ ಅಬುದಾಬಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಮಾರ್ಗಸೂಚಿ ಪ್ರಕಟವಾಗಿದೆ. ಇದರ ಅನುಸಾರ ಯುಎಇಯಲ್ಲಿರುವ ಭಾರತೀಯರು ಅನಗತ್ಯ ಪ್ರಯಾಣ ಕೈಗೊಳ್ಳದಂತೆ ಸೂಚಿಸಲಾಗಿದೆ. ಜಾಗರೂಕರಾಗಿ ಎಲ್ಲಾ ಗೈಡ್ ಲೈನ್ಸ್ ಅನ್ನು ತಪ್ಪದೇ ಪಾಲಿಸಬೇಕು. ಭಾರತೀಯ ರಾಯಭಾರ ಕಚೇರಿ ಮತ್ತು ಕಾನ್ಸುಲೇಟ್ ಜನರಲ್ ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ, ರಾಯಭಾರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಿಸಲಾಗಿದೆ. ಸೌದಿ ಅರೇಬಿಯಾ ಸರಕಾರ ಮತ್ತು ಏರ್ ಇಂಡಿಯಾ ವಿಮಾನ ಸಂಸ್ಥೆಯಿಂದಲೂ ಪ್ರಕಟಣೆಗಳು ಹೊರಬಂದಿದ್ದು, ನಾಗರಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮತ್ತು ಸರಕಾರದ ಮುಂದಿನ ಆದೇಶದವರೆಗೆ ಎಲ್ಲಾ ಗೈಡ್ ಲೈನ್ಸ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಾಗರಿಕರಲ್ಲಿ ಕೋರಲಾಗಿದೆ.