Wednesday, November 4, 2026
Wednesday, November 4, 2026

ಬೆಂಗಳೂರಿನಲ್ಲಿ 15 ಹೊಸ ಟ್ರೀ ಪಾರ್ಕ್‌ಗಳ ನಿರ್ಮಾಣ

ಜರಕಬಂಡೆ ಡಿ ಬ್ಲಾಕ್ ಮತ್ತು ಎ ಬ್ಲಾಕ್, ಮಲ್ಲಸಂದ್ರ, ಪಣತ್ತೂರು, ಕಾಳ್ಕೆರೆ, ಮಂದೂರು, ತುರಹಳ್ಳಿ ಮೀಸಲು ಅರಣ್ಯ, ತುರಹಳ್ಳಿ ಕಿರು ಅರಣ್ಯ, ದೊರೆಸ್ವಾಮಿಪಾಳ್ಯ, ಮಾಚೋಹಳ್ಳಿ ಹಾಗೂ ಸುಳಿಕೆರೆ ಪ್ರದೇಶಗಳನ್ನು ಪ್ರಸ್ತಾವನೆಯಲ್ಲಿ ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ, ಜನರು ಪ್ರಕೃತಿಯ ನಡುವೆ ವಿಶ್ರಾಂತಿ ಪಡೆಯಲು ಅನುಕೂಲ ಮಾಡಿಕೊಡುವ ಯೋಜನೆ ರೂಪಿಸಲಾಗುತ್ತಿದೆ.

ಉದ್ಯಾನನಗರಿ ಬೆಂಗಳೂರಿನಲ್ಲಿ ಹಸಿರು ಪರಿಸರವನ್ನು ಹೆಚ್ಚಿಸುವುದರ ಜತೆಗೆ ಸಾರ್ವಜನಿಕರಿಗೆ ಪ್ರಕೃತಿಯ ಮಡಿಲಿನಲ್ಲಿ ಸಮಯ ಕಳೆಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರಕಾರ ಮಹತ್ವದ ಯೋಜನೆಯೊಂದನ್ನು ರೂಪಿಸುತ್ತಿದೆ. ನಗರದ ಕಬ್ಬನ್ ಪಾರ್ಕ್‌ ಮತ್ತು ಲಾಲ್‌ಬಾಗ್ ಮಾದರಿಯಲ್ಲಿ 15 ಹೊಸ ಟ್ರೀ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ.

ನಗರದ ವಿವಿಧ ಭಾಗಗಳಲ್ಲಿರುವ ಅರಣ್ಯ ಪ್ರದೇಶಗಳ ನಿರ್ದಿಷ್ಟ ಭಾಗಗಳನ್ನು ಅಭಿವೃದ್ಧಿಪಡಿಸಿ ಜನರ ಬಳಕೆಗೆ ಮುಕ್ತಗೊಳಿಸುವುದು ಈ ಯೋಜನೆಯ ಪ್ರಮುಖ ಉದ್ದೇಶ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದು, ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಪಡೆಯಲು ಸರಕಾರ ಸಿದ್ಧತೆ ನಡೆಸುತ್ತಿದೆ. ಯೋಜನೆ ಜಾರಿಯಾದರೆ ಬೆಂಗಳೂರಿನ ನಿವಾಸಿಗಳಿಗೆ ನಗರದಲ್ಲಿಯೇ ಪ್ರಕೃತಿಯೊಂದಿಗೆ ಸಮಯ ಕಳೆಯಲು ಮತ್ತಷ್ಟು ಹಸಿರು ತಾಣಗಳು ಲಭ್ಯವಾಗಲಿವೆ. ಪ್ರಸ್ತಾವಿತ ಯೋಜನೆಯ ಮೊದಲ ಹಂತದಲ್ಲಿ ನಗರದ ವಿವಿಧೆಡೆ ಇರುವ ಅರಣ್ಯ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ಜರಕಬಂಡೆ ಡಿ ಬ್ಲಾಕ್ ಮತ್ತು ಎ ಬ್ಲಾಕ್, ಮಲ್ಲಸಂದ್ರ, ಪಣತ್ತೂರು, ಕಾಳ್ಕೆರೆ, ಮಂದೂರು, ತುರಹಳ್ಳಿ ಮೀಸಲು ಅರಣ್ಯ, ತುರಹಳ್ಳಿ ಕಿರು ಅರಣ್ಯ, ದೊರೆಸ್ವಾಮಿಪಾಳ್ಯ, ಮಾಚೋಹಳ್ಳಿ ಹಾಗೂ ಸುಳಿಕೆರೆ ಪ್ರದೇಶಗಳನ್ನು ಪ್ರಸ್ತಾವನೆಯಲ್ಲಿ ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ, ಜನರು ಪ್ರಕೃತಿಯ ನಡುವೆ ವಿಶ್ರಾಂತಿ ಪಡೆಯಲು ಅನುಕೂಲ ಮಾಡಿಕೊಡುವ ಯೋಜನೆ ರೂಪಿಸಲಾಗುತ್ತಿದೆ. ಅರಣ್ಯ ಪ್ರದೇಶಗಳ ಪರಿಸರ ಸಮತೋಲನಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದು ಸರಕಾರದ ಉದ್ದೇಶವಾಗಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ