ಕಾಫಿನಾಡಿನಲ್ಲಿ ಕಳೆಗಟ್ಟಿದ ಪ್ರವಾಸೋದ್ಯಮ ಕಾರ್ಯಕ್ರಮ
300ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ 25ಕ್ಕೂ ಹೆಚ್ಚು ರಾಜ್ಯಗಳ ಪ್ರವಾಸೋದ್ಯಮ ಖರೀದಿದಾರರು ಮತ್ತು ಉದ್ಯಮ ಪ್ರತಿನಿಧಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮವು ಕರ್ನಾಟಕದ ʻಒಂದು ರಾಜ್ಯ – ಅನೇಕ ಲೋಕಗಳುʼ ಎಂಬ ಪರಿಕಲ್ಪನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನಾವರಣಗೊಳಿಸಿತು. ರಾಜ್ಯದ ವಿವಿಧ ಪ್ರವಾಸಿ ತಾಣಗಳು, ಸಂಸ್ಕೃತಿ, ಪರಂಪರೆ, ಪ್ರಕೃತಿ ಹಾಗೂ ಆತಿಥ್ಯ ಕ್ಷೇತ್ರದ ಸಾಮರ್ಥ್ಯವನ್ನು ದೇಶದ ವಿವಿಧ ಭಾಗಗಳ ಪ್ರತಿನಿಧಿಗಳ ಮುಂದೆ ಪರಿಚಯಿಸಲಾಯಿತು. ಇದೇ ಸಂದರ್ಭದಲ್ಲಿ ಚಿಕ್ಕಮಗಳೂರಿನ ವಿಶೇಷತೆಗಳನ್ನು ತಿಳಿಸಿಕೊಡುವ ʼಚಿಕ್ಕಮಗಳೂರುʼ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆ ಹಾಗೂ ಚಿಕ್ಕಮಗಳೂರು ಜಿಲ್ಲಾ ರೆಸಾರ್ಟ್ ಮಾಲೀಕರ ಸಂಘದ ಸಹಯೋಗದಲ್ಲಿ ಮೂರು ದಿನಗಳ ಕಾಲದ ʼಡಿಸ್ಕವರ್ ಚಿಕ್ಕಮಗಳೂರು’ ಎಂಬ ವಿಭಿನ್ನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜೂನ್ 16ರಂದು ಸಂಜೆ, ಚಿಕ್ಕಮಗಳೂರಿನ ಪ್ರಸಿದ್ಧ 'ದಿ ಸೆರಾಯ್ ರೆಸಾರ್ಟ್'ನಲ್ಲಿ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮವು ಚಿಕ್ಕಮಗಳೂರಿನ ಪ್ರವಾಸೋದ್ಯಮ, ಪ್ರಕೃತಿ ಸಂಪತ್ತು, ಕಾಫಿ ಸಂಸ್ಕೃತಿ ಹಾಗೂ ಆತಿಥ್ಯ ಕ್ಷೇತ್ರದ ಸಾಮರ್ಥ್ಯವನ್ನು ದೇಶದಾದ್ಯಂತ ಪರಿಚಯಿಸುವ ಮಹತ್ವದ ವೇದಿಕೆಯಾಯಿತು.
ಇದನ್ನೂ ಓದಿ: ಅಮನಗಢ್ ವಿಸಿಟರ್ಸ್‌ಗೆ ಗುಡ್ ನ್ಯೂಸ್
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್, ವಿಶ್ವವಾಣಿ ಪ್ರವಾಸಿ ಪ್ರಪಂಚದ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್, ಸರಕಾರದ ಕಾರ್ಯದರ್ಶಿಗಳು ಡಾ. ತ್ರಿಲೋಕ್ ಚಂದ್ರ ಕೆ.ವಿ., ಐಎಎಸ್, ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಶಿವಪ್ರಸಾದ್ ಪಿ.ಆರ್., ಐಎಎಸ್, ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಶಂಖಿನಮಠ ಐಎಫ್‌ಎಸ್, ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಅಧ್ಯಕ್ಷ ಕೆ. ಶ್ಯಾಮರಾಜು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಚಿಕ್ಕಮಗಳೂರು ಶಾಸಕ ಹೆಚ್.ಡಿ. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

300ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ 25ಕ್ಕೂ ಹೆಚ್ಚು ರಾಜ್ಯಗಳ ಪ್ರವಾಸೋದ್ಯಮ ಖರೀದಿದಾರರು ಮತ್ತು ಉದ್ಯಮ ಪ್ರತಿನಿಧಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮವು ಕರ್ನಾಟಕದ ʻಒಂದು ರಾಜ್ಯ – ಅನೇಕ ಲೋಕಗಳುʼ ಎಂಬ ಪರಿಕಲ್ಪನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನಾವರಣಗೊಳಿಸಿತು. ರಾಜ್ಯದ ವಿವಿಧ ಪ್ರವಾಸಿ ತಾಣಗಳು, ಸಂಸ್ಕೃತಿ, ಪರಂಪರೆ, ಪ್ರಕೃತಿ ಹಾಗೂ ಆತಿಥ್ಯ ಕ್ಷೇತ್ರದ ಸಾಮರ್ಥ್ಯವನ್ನು ದೇಶದ ವಿವಿಧ ಭಾಗಗಳ ಪ್ರತಿನಿಧಿಗಳ ಮುಂದೆ ಪರಿಚಯಿಸಲಾಯಿತು. ಇದೇ ಸಂದರ್ಭದಲ್ಲಿ ಚಿಕ್ಕಮಗಳೂರಿನ ವಿಶೇಷತೆಗಳನ್ನು ತಿಳಿಸಿಕೊಡುವ ʼಚಿಕ್ಕಮಗಳೂರುʼ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ಈ ಕಾರ್ಯಕ್ರಮದ ಮೂಲಕ ಪ್ರವಾಸೋದ್ಯಮ ಕ್ಷೇತ್ರದ ವಿವಿಧ ಪಾಲುದಾರರ ನಡುವೆ ಹೊಸ ಸಂಪರ್ಕಗಳು ಬೆಳೆದಿದ್ದು, ಕರ್ನಾಟಕದ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಅವಕಾಶಗಳು ಸೃಷ್ಟಿಯಾಗಿವೆ. ಕಾಫಿಯ ಸುವಾಸನೆ, ಪ್ರಕೃತಿಯ ಸೊಬಗು ಮತ್ತು ಆತಿಥ್ಯದ ಉಷ್ಣತೆಯನ್ನು ಒಂದೇ ವೇದಿಕೆಯಲ್ಲಿ ಅನುಭವಿಸುವ ಅವಕಾಶವನ್ನು ಈ ಕಾರ್ಯಕ್ರಮ ಒದಗಿಸಿತು. ಒಟ್ಟಿನಲ್ಲಿ ಈ ಮೂರು ದಿನಗಳ ʻಡಿಸ್ಕವರ್ ಚಿಕ್ಕಮಗಳೂರುʼ ಕಾರ್ಯಕ್ರಮ ಚಿಕ್ಕಮಗಳೂರು ಪ್ರವಾಸೋದ್ಯಮಕ್ಕೆ ಹೊಸ ದಿಕ್ಸೂಚಿ ಆಗಲಿದೆ!