Wednesday, April 1, 2026
Wednesday, April 1, 2026

ಗೋವಾ ಪ್ರವಾಸೋದ್ಯಮಕ್ಕೆ 3 ಕೋಟಿ ರು.

ಇದು ಕೇವಲ ಯುವಜನತೆಯನ್ನು ಮಾತ್ರವಲ್ಲದೆ ಕುಟುಂಬ ಸಮೇತ ಬರುವ ಪ್ರವಾಸಿಗರನ್ನು ಸೆಳೆಯುವ ಗುರಿ ಹೊಂದಿದೆ.

ಗೋವಾ ಪ್ರವಾಸೋದ್ಯಮ ಇಲಾಖೆಯು ದೇಶೀಯ ಪ್ರವಾಸಿಗರನ್ನು ಆಕರ್ಷಿಸಲು 3 ಕೋಟಿ ರುಪಾಯಿ ವೆಚ್ಚದ ಬೃಹತ್ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಿದೆ.

ಗೋವಾ ಸರಕಾರವು ದೇಶೀಯ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಲು ಈ ಬಜೆಟ್ ಅನ್ನು ಮೀಸಲಿಟ್ಟಿದೆ. ವಿಶೇಷವಾಗಿ ಆಫ್-ಸೀಸನ್‌ನಲ್ಲಿ ಪ್ರವಾಸಿಗರನ್ನು ಸೆಳೆಯುವುದು ಮತ್ತು ಗೋವಾವನ್ನು ಕೇವಲ ಕಡಲತೀರಗಳಿಗೆ ಸೀಮಿತಗೊಳಿಸದೆ, ವರ್ಷಪೂರ್ತಿ ಭೇಟಿ ನೀಡಬಹುದಾದ ತಾಣವನ್ನಾಗಿ ಮಾಡುವುದು ಮುಖ್ಯ ಉದ್ದೇಶ. ಇದರಲ್ಲಿ ಡಿಜಿಟಲ್‌ ಮಾರ್ಕೆಟಿಂಗ್‌, ಪಿಆರ್‌ ಜತೆಗೆ ಆಧ್ಯಾತ್ಮಿಕ ಪ್ರವಾಸೋದ್ಯಮ, ಇಕೊ ಟೂರಿಸಂ ಹಾಗೂ ಸಾಹಸ ಕ್ರೀಡೆಗಳ ಕೇಂದ್ರವಾಗಿ ಗುರುತಿಸಲು ಇಲಾಖೆ ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಗೋವಾ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿಗರಿಗೆ ಶಿಸ್ತಿನ ಪಾಠ

ಈ ಅಭಿಯಾನವು ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದರೂ, ಗೋವಾ ಪ್ರವಾಸೋದ್ಯಮವು ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ಇತ್ತೀಚಿನ ಕೆಲವು ಘಟನೆಗಳಿಂದ ಗೋವಾ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಪ್ರವಾಸಿಗರಲ್ಲಿ ಮೂಡಿದೆ. ಇದರ ಜತೆಗೆ ಅಲ್ಲಿನ ಟ್ಯಾಕ್ಸಿ ದರಗಳ ವಿವಾದ, ಹೊಟೇಲ್ ಸೇವೆಗಳಲ್ಲಿನ ವ್ಯತ್ಯಯ ಮತ್ತು ಮೂಲಸೌಕರ್ಯದ ಕೊರತೆಯ ಬಗ್ಗೆ ಪ್ರವಾಸಿಗರಿಂದ ದೂರುಗಳು ಕೇಳಿಬರುತ್ತಿವೆ. ಇನ್ನು ಥೈಲ್ಯಾಂಡ್ ಹಾಗೂ ವಿಯೆಟ್ನಾಂ ಸೇರಿದಂತೆ ಹಲವು ವಿದೇಶಿ ತಾಣಗಳಿಗೆ ಕಡಿಮೆ ವೆಚ್ಚದಲ್ಲಿ ಹೋಗಿಬರಬಹುದಾದ್ದರಿಂದ ಗೋವಾ ಪ್ರವಾಸೋದ್ಯಮಕ್ಕೆ ಇದು ದೊಡ್ಡ ಸ್ಪರ್ಧೆಯೂ ಹೌದು.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!