Thursday, April 16, 2026
Thursday, April 16, 2026

ಆಂಧ್ರಪ್ರದೇಶ ಸಮುದ್ರ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ

ವಿಹಾರ ನೌಕೆಗಳ ವಾಸ್ತವ್ಯ ಮತ್ತು ಕ್ರೂಸ್ ಪ್ರಯಾಣವು ಪ್ರವಾಸಿಗರಿಗೆ ಮರೆಯಲಾಗದ ಅನುಭವವನ್ನು ನೀಡಲಿದ್ದು, ರಾಜ್ಯದ ಪ್ರವಾಸೋದ್ಯಮದ ಭವಿಷ್ಯವನ್ನು ಉಜ್ವಲಗೊಳಿಸಲಿದೆ.

ಆಂಧ್ರಪ್ರದೇಶ ಸರಕಾರವು ʻಸೀ ಟೂರಿಸಂʼ ಬಲಪಡಿಸಲು ಪ್ರಮುಖ ಹೆಜ್ಜೆ ಇಟ್ಟಿದೆ. ಭಾರತದ ಪೂರ್ವ ಕರಾವಳಿಯ ಪ್ರಮುಖ ಪ್ರವಾಸಿ ತಾಣವಾದ ವಿಶಾಖಪಟ್ಟಣಂನಲ್ಲಿ ಮಿನಿ ಕ್ರೂಸ್ ಹಡಗುಗಳ ಕಾರ್ಯಾಚರಣೆ ಮತ್ತು ವಿಹಾರ ನೌಕೆಗಳಲ್ಲಿ ವಾಸ್ತವ್ಯದ ಸೌಲಭ್ಯಗಳನ್ನು ಒದಗಿಸುವ ಬೃಹತ್ ನೀಲನಕ್ಷೆಯನ್ನು ಪ್ರವಾಸೋದ್ಯಮ ಇಲಾಖೆ ಸಿದ್ಧಪಡಿಸಿದೆ.

ಪ್ರವಾಸಿಗರನ್ನು ಆಕರ್ಷಿಸಲು ವಿಶಾಖಪಟ್ಟಣಂ ಕರಾವಳಿಯಲ್ಲಿ ಮಿನಿ ಕ್ರೂಸ್ ಹಡಗುಗಳ ಸಂಚಾರವನ್ನು ಪ್ರಾರಂಭಿಸಲು ಯೋಜಿಸಲಾಗಿದೆ. ಈ ಕ್ರೂಸ್ ಹಡಗುಗಳು ಪ್ರವಾಸಿಗರಿಗೆ ಸಮುದ್ರದ ವಿಹಂಗಮ ನೋಟವನ್ನು ಒದಗಿಸುವುದಲ್ಲದೆ, ಸಣ್ಣ ಅವಧಿಯ ಪ್ರಯಾಣ ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ಒಳಗೊಂಡಿರಲಿವೆ. ಸ್ಥಳೀಯ ಪ್ರವಾಸಿಗರು ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ಈ ಸೇವೆಗಳನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ: ನಿಷ್ಕಳಂಕ ಮಹಾದೇವನಿಗೆ ನಿತ್ಯವೂ ಸಮುದ್ರ ಸ್ನಾನ

ಈ ಬೃಹತ್ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಶಾಖಪಟ್ಟಣಂ ಬಂದರು ಮತ್ತು ಕರಾವಳಿ ತೀರದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಅಂತರರಾಷ್ಟ್ರೀಯ ಭದ್ರತಾ ಮಾನದಂಡಗಳನ್ನು ಪಾಲಿಸಲಾಗುತ್ತಿದೆ. ಪ್ರವಾಸಿಗರಿಗೆ ಸುಲಭವಾಗಿ ನೌಕೆಗಳನ್ನು ಏರಲು ಮತ್ತು ಇಳಿಯಲು ಅನುಕೂಲವಾಗುವಂತೆ ವಿಶೇಷ ಜೆಟ್ಟಿಗಳನ್ನು ನಿರ್ಮಿಸುವ ಪ್ರಸ್ತಾವನೆಯೂ ಈ ನೀಲನಕ್ಷೆಯಲ್ಲಿದೆ.

ವಿಶಾಖಪಟ್ಟಣಂ ಅನ್ನು ದಕ್ಷಿಣ ಏಷ್ಯಾದ ಪ್ರಮುಖ ಸಮುದ್ರ ಪ್ರವಾಸೋದ್ಯಮ ಹಬ್ ಆಗಿ ಪರಿವರ್ತಿಸುವುದು ಸರಕಾರದ ದೀರ್ಘಕಾಲದ ಗುರಿಯಾಗಿದೆ. ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಮೂಲಕ ಸಮುದ್ರದ ಪರಿಸರ ವ್ಯವಸ್ಥೆಗೆ ಹಾನಿಯಾಗದಂತೆ ಈ ಯೋಜನೆಗಳನ್ನು ಜಾರಿಗೊಳಿಸಲು ತಜ್ಞರ ಸಲಹೆ ಪಡೆಯಲಾಗುತ್ತಿದೆ.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ