Wednesday, February 11, 2026
Wednesday, February 11, 2026

ಜಪಾನ್ ಪ್ರವಾಸದಲ್ಲಿ ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ

ಸಹಜ ನಟನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದ ಬಹುಭಾಷಾ ನಟಿ ಸಾಯಿ ಪಲ್ಲವಿ ಜಪಾನ್‌ ಪ್ರವಾಸವನ್ನು ಕೈಗೊಂಡಿದ್ದಾರೆ. ಜಪಾನ್‌ನಲ್ಲಿ ಹಿಮ ಬೀಳುವ ಕ್ಷಣವನ್ನು ಆನಂದಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಬಹುಭಾಷಾ ನಟಿ, ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಜಪಾನ್ ಪ್ರವಾಸದಲ್ಲಿದ್ದಾರೆ. ಪ್ರೇಮಂ, ಅಮರನ್, ಫಿದಾ, ಗಾರ್ಗಿ ಮುಂತಾದ ಸೂಪರ್ ಹಿಟ್ ಚಿತ್ರಗಳ ಮೂಲಕ ಹೆಸರು ಮಾಡಿರುವ ಸಾಯಿ ಪಲ್ಲವಿ ಈಗ ಅಮೀರ್ ಖಾನ್ ನಿರ್ಮಾಣದ ’ಏಕ್ ದಿನ್’ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. ಶೂಟಿಂಗ್ ನಡುವೆ ಬಿಡುವಿನಲ್ಲಿ ಜಪಾನ್ ಗೆ ತೆರಳಿರುವ ನಟಿ, ಹಿಮದ ನಡುವೆ ಕುಣಿದು ಕುಪ್ಪಳಿಸಿದ್ದಾರೆ.

ಜಪಾನ್ ದೇಶದ ಸೊಬಗಿನಲ್ಲಿ ಕಳೆದು ಹೋಗಿರುವ ಸಾಯಿಪಲ್ಲವಿ, ಅಲ್ಲಿ ಕಳೆದ ಕ್ಷಣಗಳ ಬಗ್ಗೆ ವಿಡಿಯೋವೊಂದನ್ನು ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಭಿಮಾನಿಗಳು ʻದಿ ಡೆಫಿನೇಶನ್ ಫಾರ್ ಟ್ರೂ ಬ್ಯೂಟಿʼ ಎಂದು ಕಾಮೆಂಟ್‌ಗಳ ಸುರಿಮಳೆಗೈದಿದ್ದಾರೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ