ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ
ಕರಾವಳಿ ಮತ್ತು ಮಲೆನಾಡು ಪ್ರದೇಶಗಳು ಕಡಲತೀರ, ಧಾರ್ಮಿಕ ಹಾಗೂ ಸಾಂಸ್ಕೃತಿಕ ತಾಣಗಳು, ಪ್ರಕೃತಿ ಪ್ರವಾಸೋದ್ಯಮ ಸೇರಿದಂತೆ ವೈವಿಧ್ಯಮಯ ಪ್ರವಾಸೋದ್ಯಮ ಸಂಪನ್ಮೂಲಗಳನ್ನು ಹೊಂದಿವೆ. ಈ ಸಾಮರ್ಥ್ಯವನ್ನು ಬಳಸಿಕೊಂಡು ಸ್ಥಳೀಯ ಆರ್ಥಿಕತೆ, ಹೂಡಿಕೆ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ನೀತಿ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು ಪ್ರಸ್ತಾವಿತ ನೀತಿಯಲ್ಲಿ ಅಳವಡಿಸಬೇಕಾದ ಪ್ರಮುಖ ಅಂಶಗಳು, ಪ್ರವಾಸೋದ್ಯಮ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಪ್ರಸ್ತುತ ಎದುರಾಗುತ್ತಿರುವ ನಿಯಂತ್ರಣಾತ್ಮಕ ಸಮಸ್ಯೆಗಳ ಕುರಿತು ಸಚಿವರು ಸಮಗ್ರವಾಗಿ ಚರ್ಚಿಸಿದರು. ಕರಾವಳಿ ಮತ್ತು ಮಲೆನಾಡು ಪ್ರದೇಶಗಳು ಕಡಲತೀರ, ಧಾರ್ಮಿಕ ಹಾಗೂ ಸಾಂಸ್ಕೃತಿಕ ತಾಣಗಳು, ಪ್ರಕೃತಿ ಪ್ರವಾಸೋದ್ಯಮ ಸೇರಿದಂತೆ ವೈವಿಧ್ಯಮಯ ಪ್ರವಾಸೋದ್ಯಮ ಸಂಪನ್ಮೂಲಗಳನ್ನು ಹೊಂದಿವೆ. ಈ ಸಾಮರ್ಥ್ಯವನ್ನು ಬಳಸಿಕೊಂಡು ಸ್ಥಳೀಯ ಆರ್ಥಿಕತೆ, ಹೂಡಿಕೆ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ನೀತಿ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಮುಂದಾಗುವವರಿಗೆ ವಿವಿಧ ಇಲಾಖೆಗಳ ಅನುಮತಿಗಳನ್ನು ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಅಗತ್ಯವನ್ನು ಜನಪ್ರತಿನಿಧಿಗಳು ಪ್ರಸ್ತಾಪಿಸಿದರು.
ಶಾಸಕರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಕರಾವಳಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತೇಜನ ನೀಡಲು ಸಿಂಗಲ್ ವಿಂಡೋ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡಿದರು. ವಿವಿಧ ಅನುಮತಿಗಳು ಮತ್ತು ಇಲಾಖೆಗಳ ಸಮನ್ವಯಕ್ಕೆ ಸರಳ ವ್ಯವಸ್ಥೆ ರೂಪಿಸುವುದು ಹೊಸ ಹೂಡಿಕೆಗಳನ್ನು ಆಕರ್ಷಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.