ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ನಿಯಮ ಜಾರಿಗೆ ತರಲಾಗಿದ್ದು. ಈ ಕುರಿತು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ. ಈ ಹೊಸ ಮಾರ್ಗಸೂಚಿಯ ಪ್ರಕಾರ, ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಬಾಡಿ ವೋರ್ನ್‌ಕ್ಯಾಮೆರಾ ಕಡ್ಡಾಯವಾಗಿ ಧರಿಸಿರಬೇಕು. ಪಾಸ್‌ಪೋರ್ಟ್ ಅರ್ಜಿದಾರರನ್ನು ಪೊಲೀಸ್ ಠಾಣೆಗೆ ಕರೆಸುವ ಬದಲು ಅರ್ಜಿದಾರರು ನೀಡಿರುವ ವಿಳಾಸಕ್ಕೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಅರ್ಜಿದಾರರ ನೆರೆ ಹೊರೆಯವರ ಬಳಿ ಮಾಹಿತಿಯನ್ನು ಸಂಗ್ರಹಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮತ್ತು ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ ಕನಿಷ್ಠ 24 ಗಂಟೆಗಳ ಮೊದಲು, ಎಸ್‌ಎಂಎಸ್ ಅಥವಾ ಕರೆ ಮಾಡುವ ಮೂಲಕ ಮಾಹಿತಿ ನೀಡುವುದನ್ನೂ ಕೂಡಾ ಕಡ್ದಾಯಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.