Thursday, October 29, 2026
Thursday, October 29, 2026

ರಾತ್ರಿ ಪ್ರಯಾಣ: ರೈಲಲ್ಲಿ ಚಾರ್ಜಿಂಗ್‌ಗೆ ನಿಷೇಧ

ರೈಲಿನಲ್ಲಿ ಚಾರ್ಜಿಂಗ್ ಮೇಲೆ ನಿರ್ಬಂಧವನ್ನು 2014ರಿಂದಲೇ ಜಾರಿಗೊಳಿಸಲಾಗಿದೆ. ಬೆಂಗಳೂರು-ಹಜೂರ್ ಸಾಹಿಬ್ ನಾಂದೇಡ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಅನಂತರ ರೈಲ್ವೇ ಸುರಕ್ಷತಾ ಆಯುಕ್ತರ ಶಿಫಾರಸಿನ ಮೇರೆಗೆ ಇದನ್ನು ಪರಿಚಯಿಸಲಾಯಿತು. ಇದರ ಬಳಿಕ 2021ರಲ್ಲಿ ಮತ್ತೊಮ್ಮೆ ಈ ಕುರಿತು ನಿರ್ದೇಶನವನ್ನು ನೀಡಲಾಯಿತು ಮತ್ತು ಪಶ್ಚಿಮ ರೈಲ್ವೇ ಚಾರ್ಜಿಂಗ್ ಪಾಯಿಂಟ್‌ಗಳಿಗೆ ವಿದ್ಯುತ್ ಕಡಿತಗೊಳಿಸಲು ಪ್ರಾರಂಭಿಸಿತ್ತು.

ರೈಲುಗಳಲ್ಲಿ ಇನ್ನು ಮುಂದೆ ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ರಾತ್ರಿ ಚಾರ್ಜ್ ಗೆ ಇಡುವಂತಿಲ್ಲ. ಈ ಕುರಿತು ಕಟ್ಟುನಿಟ್ಟಿನ ನಿಯಮ ಪಾಲನೆಗೆ ಭಾರತೀಯ ರೈಲ್ವೇ ಮಂಡಳಿಯು ಎಲ್ಲ ವಲಯಗಳಿಗೆ ನಿರ್ದೇಶನವನ್ನು ನೀಡಿದೆ. ದಾದರ್‌ನಿಂದ ಬದ್ಲಾಪುರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಇತ್ತೀಚೆಗೆ ಚಾರ್ಜ್ಗೆ ಇಟ್ಟಿದ್ದ ಪವರ್ ಬ್ಯಾಂಕ್ ಸ್ಫೋಟಗೊಂಡ ಬಳಿಕ ರೈಲಿನಲ್ಲಿ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಚರ್ಚೆಯನ್ನು ಹುಟ್ಟುಹಾಕಿತ್ತು. ಹೀಗಾಗಿ ರೈಲು ಮಂಡಳಿಯು ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೆ ರೈಲುಗಳಲ್ಲಿ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳಿಗೆ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಲು ನಿರ್ದೇಶನವನ್ನು ನೀಡಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ಅಡಿಗಾಸ್‌ ಯಾತ್ರಾ ರೆಡಿ!

ಮುಂಬೈ ಸ್ಥಳೀಯ ರೈಲಿನಲ್ಲಿ ಚಾರ್ಜ್‌ಗೆ ಇಟ್ಟಿದ್ದ ಪವರ್ ಬ್ಯಾಂಕ್ ಒಂದು ಸ್ಫೋಟಗೊಂಡು ಕೋಚ್‌ನಲ್ಲಿ ದಟ್ಟ ಹೊಗೆ ತುಂಬಿದ ಘಟನೆಯ ಬಳಿಕ ರೈಲು ಮಂಡಳಿಯು ಅಕ್ಟೋಬರ್ 26 ರಂದು ಬರೆದ ಪತ್ರದಲ್ಲಿ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೆ ರೈಲುಗಳಲ್ಲಿ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳಿಗೆ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಬೇಕು. ಇದಕ್ಕೆ ಸಂಬಂಧಿಸಿ ಯಾವುದೇ ವಿನಾಯಿತಿ ನೀಡುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ದಾದರ್‌ನಿಂದ ಬದ್ಲಾಪುರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಪವರ್ ಬ್ಯಾಂಕ್ ಸ್ಪೋಟಗೊಂಡ ವೇಳೆ ಚಾರ್ಜಿಂಗ್ ಪಾಯಿಂಟ್‌ಗಳನ್ನು ಆಫ್ ಮಾಡಲು ರೈಲ್ವೇ ಸಿಬ್ಬಂದಿ ವಿಫಲರಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ರೈಲು ಮಂಡಳಿ, ರಾತ್ರಿ ಅವಧಿಯಲ್ಲಿ ಎಲ್ಲ ಕೋಚ್‌ಗಳಲ್ಲಿನ ಚಾರ್ಜಿಂಗ್ ಪಾಯಿಂಟ್‌ಗಳನ್ನು ಆಫ್ ಮಾಡಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಅನಿರೀಕ್ಷಿತ ತಪಾಸಣೆ ನಡೆಸುವಂತೆ ಸೂಚಿಸಿದೆ.

ರೈಲಿನಲ್ಲಿ ಚಾರ್ಜಿಂಗ್ ಮೇಲೆ ನಿರ್ಬಂಧವನ್ನು 2014ರಿಂದಲೇ ಜಾರಿಗೊಳಿಸಲಾಗಿದೆ. ಬೆಂಗಳೂರು-ಹಜೂರ್ ಸಾಹಿಬ್ ನಾಂದೇಡ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಅನಂತರ ರೈಲ್ವೇ ಸುರಕ್ಷತಾ ಆಯುಕ್ತರ ಶಿಫಾರಸಿನ ಮೇರೆಗೆ ಇದನ್ನು ಪರಿಚಯಿಸಲಾಯಿತು. ಇದರ ಬಳಿಕ 2021ರಲ್ಲಿ ಮತ್ತೊಮ್ಮೆ ಈ ಕುರಿತು ನಿರ್ದೇಶನವನ್ನು ನೀಡಲಾಯಿತು ಮತ್ತು ಪಶ್ಚಿಮ ರೈಲ್ವೇ ಚಾರ್ಜಿಂಗ್ ಪಾಯಿಂಟ್‌ಗಳಿಗೆ ವಿದ್ಯುತ್ ಕಡಿತಗೊಳಿಸಲು ಪ್ರಾರಂಭಿಸಿತ್ತು.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ