ಫುಕೆಟ್– ದೆಹಲಿ ಏರ್ ಇಂಡಿಯಾ ವಿಮಾನ: ಪ್ರಯಾಣಿಕರು ಸೇಫ್
ವಿಮಾನವು ಸುರಕ್ಷಿತವಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ವಿಮಾನದಿಂದ ಇಳಿದಿದ್ದಾರೆ.
ಥೈಲ್ಯಾಂಡ್‌ನ ಫುಕೆಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾದ AI2379 ವಿಮಾನವು ಆಗಸ್ಟ್ 4ರಂದು ಮಧ್ಯಾಕಾಶದಲ್ಲಿ ತೀವ್ರ ಗಾಳಿಯ ಅಬ್ಬರ (ಟರ್ಬುಲೆನ್ಸ್) ಎದುರಿಸಿದ ಪರಿಣಾಮ ಕೆಲ ಪ್ರಯಾಣಿಕರು ಹಾಗೂ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಮಾನವು ಸುರಕ್ಷಿತವಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ವಿಮಾನದಿಂದ ಇಳಿದಿದ್ದಾರೆ.

ಏರ್ ಇಂಡಿಯಾ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಪ್ರಯಾಣದ ವೇಳೆ ಸಂಭವಿಸಿದ ಟರ್ಬುಲೆನ್ಸ್‌ನಿಂದ ವಿಮಾನದ ಎತ್ತರದಲ್ಲಿ ಕ್ಷಣಿಕ ಬದಲಾವಣೆ ಉಂಟಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಗಾಯಗೊಂಡ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು. ಗಾಯಗಳು ಗಂಭೀರ ಸ್ವರೂಪದಲ್ಲಿಲ್ಲ ಎಂದು ಸಂಸ್ಥೆ ತಿಳಿಸಿದೆ.
ಪ್ರಾಥಮಿಕ ಮಾಹಿತಿಯಂತೆ, 12 ಮಂದಿಯಲ್ಲಿ 10 ಪ್ರಯಾಣಿಕರು ಮತ್ತು ಇಬ್ಬರು ಕ್ಯಾಬಿನ್ ಸಿಬ್ಬಂದಿಗಳಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ಕೆಲವರನ್ನು ದೆಹಲಿಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದೆ. ವಿಮಾನದಲ್ಲಿ ಒಟ್ಟು 134 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ವಿಮಾನವು ಟರ್ಬುಲೆನ್ಸ್‌ನ ವೇಳೆ ಸುಮಾರು 300 ಅಡಿ ಎತ್ತರ ಕಳೆದುಕೊಂಡಿದ್ದು, ಹಠಾತ್ ಉಂಟಾದ ಈ ಬದಲಾವಣೆಯಿಂದ ಕೆಲವರು ತಮ್ಮ ಆಸನಗಳಿಂದ ಎಸೆಯಲ್ಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಸಂಬಂಧಿತ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಏರ್ ಇಂಡಿಯಾ ಸಂಪೂರ್ಣ ಸಹಕಾರ ನೀಡುತ್ತಿದೆ.