ಕೆಎಸ್‌ಟಿಡಿಸಿಗೆ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಪ್ರಸಾದ್ ಪಿ.ಆರ್ ನೇಮಕ
ಅಕ್ಟೋಬರ್ ಇಂದ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಮಿಶ್ರಾ ಜಾಗಕ್ಕೆ ಹೊಸ ಅಧಿಕಾರಿ ನೇಮಕಗೊಂಡಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸ ಅಭಿವೃದ್ಧಿ ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಪ್ರಸಾದ್ ಪಿ.ಆರ್ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಕರ್ನಾಟಕ ಕೇಡರ್‌ನ 2013ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಹಾಗೂ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿದ್ದ ಇವರು ಆರೋಗ್ಯ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.
ಆಡಳಿತಾತ್ಮಕ ಅನುಭವ ಹೊಂದಿರುವ ಇವರು ಪ್ರವಾಸೋದ್ಯಮದ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ. ಈವರೆಗೆ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕರ್ನಾಟಕ ರಾಜ್ಯ ಪ್ರವಾಸ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಜನಪ್ರಿಯರಾಗಿದ್ದ ಅವರು ಕಳೆದ ಅಕ್ಟೋಬರ್‌ನಲ್ಲಿ ಕೆಎಸ್‌ಟಿಡಿಸಿಗೆ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದರು.