ಸುಬ್ರಹ್ಮಣ್ಯ ರೋಡ್ - ಮಂಗಳೂರು ಪ್ಯಾಸೆಂಜರ್ ರೈಲು 35 ದಿನಗಳ ಕಾಲ ರದ್ದು
ಮಾರ್ಚ್ 23ರಿಂದ ಏಪ್ರಿಲ್ 14ರವರೆಗೆ ಹಾಗೂ ಜೂನ್ 10ರಿಂದ ಜೂನ್ 21ರವರೆಗೆ ಒಟ್ಟು 35 ದಿನಗಳ ಕಾಲ ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ದಕ್ಷಿಣ ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ನಡೆಯಲಿರುವ ಕಾಮಗಾರಿಗಳ ಹಿನ್ನೆಲೆಯಲ್ಲಿ, ಸುಬ್ರಹ್ಮಣ್ಯ ರೋಡ್ - ಮಂಗಳೂರು ಪ್ಯಾಸೆಂಜರ್ ರೈಲು ರದ್ದು ಮಾಡಲಾಗಿದೆ. ಮಾರ್ಚ್ 23ರಿಂದ ಏಪ್ರಿಲ್ 14ರವರೆಗೆ ಹಾಗೂ ಜೂನ್ 10ರಿಂದ ಜೂನ್ 21ರವರೆಗೆ ಒಟ್ಟು 35 ದಿನಗಳ ಕಾಲ ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಇನ್ನೂ ಕೆಲವು ರೈಲುಗಳನ್ನು ನಿರ್ದಿಷ್ಟ ದಿನಗಳಲ್ಲಿ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತಿದೆ. ಯಶವಂತಪುರ - ಕಾರವಾರ ಎಕ್ಸ್‌ಪ್ರೆಸ್, ಯಶವಂತಪುರ - ಮಂಗಳೂರು ಎಕ್ಸ್‌ಪ್ರೆಸ್ ರೈಲುಗಳು ಏಪ್ರಿಲ್ ತಿಂಗಳಲ್ಲಿ ಸುಮಾರು 20 ನಿಮಿಷಗಳಷ್ಟು ವಿಳಂಬವಾಗಲಿದೆ. ಅದೇ ರೀತಿ ಮಂಗಳೂರು-ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು ಏಪ್ರಿಲ್ 21ರಿಂದ ಜೂನ್ 9ರವರೆಗೆ 50 ದಿನಗಳ ಕಾಲ ಸುಮಾರು 55 ನಿಮಿಷಗಳ ವಿಳಂಬವಾಗಲಿದೆ.
ಇದನ್ನೂ ಓದಿ: ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಮಾಚಾಪುರ
ಹಾಗೆಯೇ, ಸುಬ್ರಹ್ಮಣ್ಯ ರೋಡ್ – ಮಂಗಳೂರು ಪ್ಯಾಸೆಂಜರ್ ರೈಲು ಏಪ್ರಿಲ್ 21ರಿಂದ ಜೂನ್ 9ರವರೆಗೆ ಆಯ್ದ 22 ದಿನಗಳಲ್ಲಿ ಸುಮಾರು 15 ನಿಮಿಷ ತಡವಾಗಿ ಸಂಚರಿಸಲಿದೆ.
ಸರಕು ರೈಲುಗಳ ಸಂಚಾರಕ್ಕೆ ಹೆಚ್ಚಿನ ಅಡ್ಡಿಗಳು ಆಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಅಗತ್ಯವಿದ್ದಲ್ಲಿ ಬ್ಲಾಕ್‌ಗಳನ್ನು ಮುಂದೂಡುವ ಅಥವಾ ರದ್ದುಪಡಿಸುವ ವ್ಯವಸ್ಥೆಯೂ ಮಾಡಲಾಗಿದೆ ಎನ್ನಲಾಗಿದೆ.