ಮಹಾಶಿವರಾತ್ರಿ ಜಾತ್ರೆ: ಪಾದಯಾತ್ರಿಗಳಿಗೆ ಹೊಸ ರೂಲ್ಸ್
ಒಟ್ಟು 8 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೂ ಬಂದೂಕು, ವಾಕಿಟಾಕಿ, ಮಚ್ಚು, ಲಾಠಿ ಹಾಗೂ ಪಟಾಕಿಗಳನ್ನು ವಿತರಿಸಲಾಗಿದೆ. ಡಿಆರ್‌ಎಫ್‌ಒ, ಪೊಲೀಸ್ ಸಿಬ್ಬಂದಿ, ವಾಚರ್ ಹಾಗೂ ಎಪಿಸಿ ಕ್ಯಾಂಪ್ ಸಿಬ್ಬಂದಿ ಸೇರಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜತೆಗೆ ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಐದು ಸಿಬ್ಬಂದಿ ಈ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದಾರೆ. ಡ್ರೋನ್ ಕ್ಯಾಮೆರಾ ಮೂಲಕವೂ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ.
ಫೆಬ್ರವರಿ 7 ರಿಂದ 20 ರವರೆಗೆ ನಡೆಯಲಿರುವ ಮಲೆ ಮಹದೇಶ್ವರ ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಯಾವುದೇ ಅನಾಹುತ ಸಂಭವಿಸದಂತೆ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಮನ್ವಯದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ. ಇತ್ತೀಚಿನ ಚಿರತೆ ದಾಳಿಯಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಪಾದಯಾತ್ರಿಗಳು ಗುಂಪುಗೂಡಿ ಪ್ರಯಾಣಿಸಲು, ಕಾಡಿಗೆ ಒಬ್ಬರೇ ಹೋಗದಂತೆ ಸೂಚನೆ ನೀಡಿದೆ.
ಇದನ್ನೂ ಓದಿ: ಪ್ರೇಮಿಗಳ ದಿನ ವಿಶ್ವವಿಖ್ಯಾತ ನಂದಿ ಗಿರಿಧಾಮ ಬಂದ್
ಭಕ್ತರು ಮೂತ್ರ ವಿಸರ್ಜನೆ, ಮಲ ವಿಸರ್ಜನೆಗೆ ಕಾಡಿನ ಒಳ ಹೋಗದಂತೆ ಕಟ್ಟಪ್ಪಣೆ ವಿಧಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನೊಬ್ಬ ಇತ್ತೀಚೆಗೆ ಚಿರತೆ ದಾಳಿಗೆ ಬಲಿಯಾದ ಘಟನೆ ಬಳಿಕ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಹೈಅಲರ್ಟ್ ಘೋಷಿಸಿದೆ. ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯೆ ಹೈಅಲರ್ಟ್ ಘೋಷಿಸಲಾಗಿದ್ದು, ಪ್ರತಿ ಕಿಲೋಮೀಟರ್‌ಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿದೆ.