ಹಂಪಿ ಸಂರಕ್ಷಣೆಗೆ ಯುನೆಸ್ಕೋ ತಜ್ಞರ ಮೆಚ್ಚುಗೆ
ಹಂಪಿಯಲ್ಲಿ ಕ್ಷೇತ್ರ ಪರಿಶೀಲನೆ ನಡೆಸಿದ ಬಳಿಕ ಬುಧವಾರ ವಿಧಾನಸೌಧದಲ್ಲಿ ನಡೆದ ಸಮಾರೋಪ ಸಭೆಯಲ್ಲಿ ತಜ್ಞರು ತಮ್ಮ ಪ್ರಾಥಮಿಕ ಅಭಿಪ್ರಾಯ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳೊಂದಿಗೆ ಹಂಚಿಕೊಂಡರು. ಸ್ಮಾರಕಗಳ ಸಂರಕ್ಷಣೆಯ ಜತೆಗೆ ಸ್ಥಳೀಯ ಸಮುದಾಯದ ಪಾಲ್ಗೊಳುವಿಕೆ ಹೆಚ್ಚಿಸುವುದು, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರಕ್ಕೆ ತಜ್ಞ ಮಾನವ ಸಂಪನ್ಮೂಲ ಹಾಗೂ ಆರ್ಥಿಕ ಬಲ ಒದಗಿಸುವುದು ಮತ್ತು ಪರಂಪರೆ ನಿರ್ವಹಣೆಯಲ್ಲಿ ಆಡಳಿತಾತ್ಮಕ ನಿರಂತರತೆ ಕಾಯ್ದುಕೊಳ್ಳುವುದು ಅಗತ್ಯವೆಂದು ಸಲಹೆ ನೀಡಿದರು.
ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಹಂಪಿಯ ಸ್ಮಾರಕಗಳ ಸಂರಕ್ಷಣಾ ಸ್ಥಿತಿ ಹಾಗೂ ರಾಜ್ಯ ಸರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮತ್ತು ಇತರ ಸಂಸ್ಥೆಗಳ ನಡುವಿನ ಸಮನ್ವಯಕ್ಕೆ ಯುನೆಸ್ಕೋ ತಜ್ಞರ ತಂಡ ಮೆಚ್ಚುಗೆ ವ್ಯಕ್ತಪಡಿಸಿದೆ. ಹಂಪಿಯ ಸಂರಕ್ಷಣೆಗೆ ಸಂಬಂಧಿಸಿದ ಅಂತಿಮ ಮಿಷನ್ ವರದಿಯನ್ನು ಡಿಸೆಂಬರ್ ಮಧ್ಯಭಾಗದಲ್ಲಿ ಸಲ್ಲಿಸುವ ನಿರೀಕ್ಷೆಯಿದೆ. ಈ ಕುರಿತು ಕೀನ್ಯಾದ ಯುನೆಸ್ಕೋ ತಜ್ಞ ಪ್ರೊ. ಜಾರ್ಜ್ ಅಬುಂಗು, ಹಂಪಿ ಜಾಗತಿಕ ಮಹತ್ವದ ಅಪರೂಪದ ಪರಂಪರೆ ತಾಣ, ಸ್ಮಾರಕಗಳ ಸ್ಥಿತಿ ಮತ್ತು ನಡೆಯುತ್ತಿರುವ ಸಂರಕ್ಷಣಾ ಕಾರ್ಯಗಳ ಬಗ್ಗೆ ತೃಪ್ತಿ ಇದೆ. ತಜ್ಞರ ತಂಡವು ಪರಿಶೀಲಕರಾಗಿ ಅಲ್ಲ, ಸ್ಮಾರಕದ ಅಭಿವೃದ್ಧಿಯ ಸ್ನೇಹಿತರು ಮತ್ತು ಪಾಲುದಾರರಾಗಿ ಭೇಟಿ ನೀಡಿದೆ.
ಹಂಪಿಯ ಭವಿಷ್ಯದ ನಿರ್ವಹಣೆಯಲ್ಲಿ ಸ್ಥಳೀಯ ಸಮುದಾಯ ಕೇಂದ್ರವಾಗಿರಿಸಬೇಕು. ಹಂಪಿಯಲ್ಲಿ ಕ್ಷೇತ್ರ ಪರಿಶೀಲನೆ ನಡೆಸಿದ ಬಳಿಕ ಬುಧವಾರ ವಿಧಾನಸೌಧದಲ್ಲಿ ನಡೆದ ಸಮಾರೋಪ ಸಭೆಯಲ್ಲಿ ತಜ್ಞರು ತಮ್ಮ ಪ್ರಾಥಮಿಕ ಅಭಿಪ್ರಾಯ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳೊಂದಿಗೆ ಹಂಚಿಕೊಂಡರು. ಸ್ಮಾರಕಗಳ ಸಂರಕ್ಷಣೆಯ ಜತೆಗೆ ಸ್ಥಳೀಯ ಸಮುದಾಯದ ಪಾಲ್ಗೊಳುವಿಕೆ ಹೆಚ್ಚಿಸುವುದು, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರಕ್ಕೆ ತಜ್ಞ ಮಾನವ ಸಂಪನ್ಮೂಲ ಹಾಗೂ ಆರ್ಥಿಕ ಬಲ ಒದಗಿಸುವುದು ಮತ್ತು ಪರಂಪರೆ ನಿರ್ವಹಣೆಯಲ್ಲಿ ಆಡಳಿತಾತ್ಮಕ ನಿರಂತರತೆ ಕಾಯ್ದುಕೊಳ್ಳುವುದು ಅಗತ್ಯವೆಂದು ಸಲಹೆ ನೀಡಿದರು. ಅಭಿವೃದ್ಧಿ ಆಯುಕ್ತ ಉಮಾ ಮಹಾದೇವನ್ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಯುನೆಸ್ಕೋ ತಜ್ಞ ಜತೆ ಸಭೆ ನಡೆಯಿತು. ಈ ವೇಳೆ ಕೀನ್ಯಾದ ಯುನೆಸ್ಕೋ ತಜ್ಞ ಪ್ರೊ. ಜಾರ್ಜ್ ಅಬುಂಗು, ಜವಾನ್ನ ಯುನೆಸ್ಕೋ ತಜ್ಞ ಪ್ರೊ.ಇಚಿತಾ ಶಿಮೋಡಾ, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ.ರಾಮ್ ಪ್ರಸಾತ್ ಮನೋಹರ್ ಸೇರಿದಂತೆ ಇನ್ನಿತರರು ಇದ್ದರು.