Tuesday, August 19, 2025
Tuesday, August 19, 2025

ಹಾಂಗ್‌ಕಾಂಗ್‌ ಮತ್ತು ಸಿಂಗಾಪುರದಲ್ಲಿ ಕೋವಿಡ್‌-19 ಸೋಂಕು: ಪ್ರವಾಸಿಗರು ತಿಳಿಯಬೇಕಾದದ್ದು ಏನು?

ಕೆಲವು ವರ್ಷಗಳ ಹಿಂದೆಯಷ್ಟೇ ಕೋವಿಡ್‌ ಇಡೀ ಜಗತ್ತನ್ನು ತಲ್ಲಣಗೊಳಿಸಿತ್ತು. ಸೋಂಕಿನಿಂದ ಲಕ್ಷಾಂತರ ಜನರು ಬಳಲಿ ಹೋಗಿದ್ದರು. ಆಯಾ ದೇಶದ ಸರ್ಕಾರಗಳು ಲಾಕ್‌ಡೌನ್‌ ಘೋಷಿಸಿದ್ದವು. ಇದೀಗ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದೆ.

ಕೆಲವು ವರ್ಷಗಳ ಹಿಂದೆಯಷ್ಟೇ ಕೋವಿಡ್‌(Covid) ಇಡೀ ಜಗತ್ತನ್ನು ತಲ್ಲಣಗೊಳಿಸಿತ್ತು. ಸೋಂಕಿನಿಂದ ಲಕ್ಷಾಂತರ ಜನರು ಬಳಲಿ ಹೋಗಿದ್ದರು. ಆಯಾ ದೇಶದ ಸರ್ಕಾರಗಳು ಲಾಕ್‌ಡೌನ್‌ ಘೋಷಿಸಿದ್ದವು. ಇದೀಗ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಸಿಂಗಾಪುರ(Singapore) ಮತ್ತು ಹಾಂಗ್‌ಕಾಂಗ್‌ನಲ್ಲಿ(Hong Kong) ಮತ್ತೆ ಕೋವಿಡ್‌ ಸೋಂಕು ಕಾಣಿಸಿಕೊಂಡಿದೆ. ಪ್ರವಾಸಿಗರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ನೀಡಲಾಗಿದೆ.

ಏಷ್ಯಾದಲ್ಲಿ ಅತಿ ಹೆಚ್ಚು ಭೇಟಿ ನೀಡುವ ಎರಡು ಪ್ರಸಿದ್ಧ ಪ್ರವಾಸಿ ನಗರಗಳಾದ ಸಿಂಗಾಪುರ ಮತ್ತು ಹಾಂಗ್ ಕಾಂಗ್‌ನಲ್ಲಿ ಮತ್ತೊಮ್ಮೆ COVID-19 ಸೋಂಕು ದೃಢಪಟ್ಟಿದೆ. ಹಾಗಾಗಿ ಆಯಾ ಪ್ರದೇಶದ ಅಧಿಕಾರಿಗಳು ಪ್ರವಾಸಿಗರಿಗೆ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಕಡ್ಡಾಯವಾಗಿ ಮುನ್ನೆಚ್ಚರಿಗೆ ಕ್ರಮಗಳನ್ನು ಪಾಲಿಸುವಂತೆ ಹೇಳಿದ್ದಾರೆ.

ಸಿಂಗಾಪುರದ ಆರೋಗ್ಯ ಸಚಿವಾಲಯವು ಶೇ.28 ರಷ್ಟು ಕೋವಿಡ್‌ ಪ್ರಕರಣಗಳು ಮೇ ತಿಂಗಳಲ್ಲಿ ಹೆಚ್ಚಳವಾಗಿದೆ ಎಂದು ವರದಿ ಮಾಡಿದೆ. ಸರಿಸುಮಾರು 14,200 ಸೋಂಕುಗಳು ದಾಖಲಾಗಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಸುಮಾರು ಶೇ.30 ರಷ್ಟು ಹೆಚ್ಚಾಗಿದೆ. ಹಾಂಕ್‌ಕಾಂಗ್‌ನಲ್ಲಿಯೂ ಸೋಂಕು ದೃಢಪಟ್ಟಿದೆ.

Deekshith Nair

Deekshith Nair

Travel blogger and adventurer passionate about exploring new cultures and sharing travel experiences.

ವ್ಹಾವ್..ವ್ಹಾವ್..ಗೋವಾ!

Read Previous

ವ್ಹಾವ್..ವ್ಹಾವ್..ಗೋವಾ!

ಮಾರಿಷಸ್‌ ಎಂಬ ಸ್ವರ್ಗಸೀಮೆ!

Read Next

ಮಾರಿಷಸ್‌ ಎಂಬ ಸ್ವರ್ಗಸೀಮೆ!