Thursday, March 19, 2026
Thursday, March 19, 2026

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಮಾಚಾಪುರ

ಮಂಗಳವಾರ ಸುರಿದ ಆಲಿಕಲ್ಲು ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಾಚಾಪುರ ಥೇಟ್‌ ಕಾಶ್ಮೀರ ರೂಪ ಪಡೆದುಕೊಂಡಿತ್ತು. ಆಲಿಕಲ್ಲು ಮಳೆಯಿಂದಾಗಿ ಮಾಚಾಪುರದ ರಸ್ತೆ ಮತ್ತು ಮನೆಗಳ ಮೇಲೆಲ್ಲ ಆಲಿಕಲ್ಲುಗಳು ಆವರಿಸಿದ್ದ ವಿಡೀಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ಕುರಿತು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಡಾ. ಸಿ.ಎಸ್. ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಸ್ಥಳೀಯ ಮಟ್ಟದಲ್ಲಿದ್ದ ತೀವ್ರ ಗಾಳಿಚಲನೆ, ಉಷ್ಣತೆ ಹಾಗೂ ತೇವಾಂಶಗಳ ಸಂಯೋಜನೆಯ ವಾತಾವರಣ ಇದ್ದ ಕಾರಣದಿಂದಾಗಿ ಈ ಆಲಿಕಲ್ಲು ಮಳೆ ಸಂಭವಿಸಿದೆ. ಮಾನ್ಸೂನ್ ಪೂರ್ವ ಮಳೆಯ ಅವಧಿಯಲ್ಲಿ ಆಲಿಕಲ್ಲು ಮಳೆಯಿಂದ ಇಂಥ ಘಟನೆಗಳು ಸಂಭವಿಸುವುದು ಸಾಮಾನ್ಯ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿದ್ದ ಗಾಳಿಯ ವ್ಯತ್ಯಾಸವಾಗಿದೆ ಹಾಗೂ ಉತ್ತರ ದಕ್ಷಿಣ ದಿಕ್ಕಿನಲ್ಲಿನ ವಾಯುಭಾರ ಕುಸಿತ ಉಂಟಾಗಿದ್ದರಿಂದ ಈ ಆಲಿಕಲ್ಲು ಮಳೆ ಸಂಭವಿಸಿದೆ. ಇದರ ಜತೆಗೆ ಅತಿಯಾದ ಬಿಸಿಲೂ ಈ ಹವಾಮಾನ ವೈಪರೀತ್ಯಕ್ಕೆ ಕಾರಣವಾಗಿದೆ ಎಂದಿದ್ದಾರೆ.

ಮಳೆ ನಿಂತ ಕೂಡಲೇ ಜನರು ಮನೆಗಳಿಂದ ಹೊರಬಂದು ಈ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದಾರೆ. ಕೆಲವರು ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಒಟ್ಟಾರೆ ಈ ಆಲಿಕಲ್ಲು ಮಳೆಯಿಂದ ಮಾಚಾಪುರ ಗ್ರಾಮ ಥೇಟ್‌ ಕಾಶ್ಮೀರದಂತೆ ಬಿಳಿಯಾಗಿ ನೋಡುಗರ ಕಣ್ಮನ ತಣಿಸಿದೆ.

Jadesha Emmiganur

Jadesha Emmiganur

Jadesha Emmiganur Is a Passionate Journalist from Ballari

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..