ಐತಿಹಾಸಿಕ ಬೆಂಗಳೂರು ಕರಗಕ್ಕೆ ಧರ್ಮರಾಯ ಸ್ವಾಮಿ ದೇವಾಲಯದ ಸಮಿತಿ ಮುಹೂರ್ತ ನಿಗದಿ ಮಾಡಿದೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಮಾರ್ಚ್ 30ರಂದು ಹಸಿ ಕರಗ ನಡೆಯಲಿದ್ದು, ಏಪ್ರಿಲ್ 1ರ ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ವಿಜೃಂಭಣೆಯಿಂದ ಬೆಂಗಳೂರು ಕರಗ ನಡೆಯಲಿದ್ದು, ಕಳೆದ ವರ್ಷದಂತೆ ಅರ್ಚಕರಾದ ಎ. ಜ್ಞಾನೇಂದ್ರ ಸ್ವಾಮಿ ಅವರು ಈ ಬಾರಿಯೂ ಕರಗ ಹೊರಲಿದ್ದಾರೆ ಎಂದು ತಿಳಿದು ಬಂದಿದೆ. ಕರಗದ ಕೇಂದ್ರ ಬಿಂದುವಾಗಿ, ಧರ್ಮರಾಯಸ್ವಾಮಿಗೆ ವಿಶೇಷ ಪೂಜೆಗಳು ಮತ್ತು ವಿಧಿವಿಧಾನಗಳು ನೆರವೇರಲಿದೆ ಎಂದು ದೇವಾಲಯದ ಸಮಿತಿ ತಿಳಿಸಿದೆ.